ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮುಮ್ಮಿಗಟ್ಟಿ ಬಳಿ ಪಾದಚಾರಿಗಳಿಗೆ ಕಾರು ಡಿಕ್ಕಿ:ಇಬ್ಬರು ಸ್ಥಳದಲ್ಲೇ ಸಾವು

ಧಾರವಾಡ: ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ-ಗರಗ ರಸ್ತೆಯಲ್ಲಿನ ಮುಮ್ಮಿಗಟ್ಟಿ ಬಳಿ ಸಂಭವಿಸಿದೆ.

ಮುಮ್ಮಿಗಟ್ಟಿ ಸಮೀಪದ ಟಾಟಾ ಹಿಟಾಚಿ‌ ಕಂಪೆನಿ ಹತ್ತಿರ ಈ ದುರ್ಘಟನೆ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಮೂವರು ಮಹಿಳೆಯರ ಪೈಕಿ ಇಬ್ಬರಿಗೆ ಅತೀ ವೇಗದಿಂದ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಲೋಕೂರು ಗ್ರಾಮದ ನೀಲಮ್ಮ ಗಾಣಿಗೇರ ಹಾಗೂ ರೇಣಮ್ಮ ಗಾಣಿಗೇರ ಎಂಬುವವರೇ ಈ ಘಟನೆಯಲ್ಲಿ ಸಾವನ್ನಪ್ಪಿದವರು.

ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

24/03/2022 09:57 am

Cinque Terre

164.81 K

Cinque Terre

8

ಸಂಬಂಧಿತ ಸುದ್ದಿ