ಹುಬ್ಬಳ್ಳಿ : ರಸ್ತೆ ಮಧ್ಯದ ಡಿವೈಡರ್ ಗೆ ಓಮಿನಿ ವಾಹನವೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕಾಟನ್ ಮಾರುಕಟ್ಟೆಯಲ್ಲಿನ ಸಂಚಾರಿ ಪೋಲಿಸ್ ಠಾಣೆಯ ಪಕ್ಕದಲ್ಲಿ ನಡೆದಿದೆ.
ಘಟನೆಯಲ್ಲಿ ಓರ್ವನ ಕೈ ಕಟ್ ಆಗಿದ್ದು, ಮತ್ತೊರ್ವನಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಇನ್ನೂಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರು ಬೆಂಗಳೂರು ಮೂಲದವರೆಂದು ಹೇಳಲಾಗಿದ್ದು, ಸ್ಟೀಕರ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಕಿಮ್ಸ್ ಗೆ ದಾಖಲಿಸಲಾಗಿದೆ. ಇವರು ಹೊಸೂರಿನಿಂದ ಚನ್ನಮ್ಮ ವೃತ್ತದ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ಕೂಡಾ ದಾಖಲಿಸಿಕೊಂಡಿದ್ದಾರೆ.
Kshetra Samachara
25/03/2022 10:19 pm