ಕಲಘಟಗಿ: ಕಾರವಾರದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಘಟಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ನಡೆದಿದೆ.
ಘಟನೆ ಪರಿಣಾಮ ಅಣ್ಣಪ್ಪ ಹುಂಚಣ್ಣವರ ಎನ್ನುವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಲಘಟಗಿ ಪಟ್ಟಣದಲ್ಲಿ ಈ ರೀತಿ ಘಟನೆಗಳು ಸಂಭವಿಸುತ್ತಿವೆ. ಮೃತ ಯುವಕ ಒಬ್ಬನೇ ಪುತ್ರನಾಗಿದ್ದು ತನ್ನ ಕುಟುಂಬಕ್ಕೆ ಆಸರೆಯಾಗಿದ್ದ. ಹೀಗಾಗಿ ಸರಕಾರ ಪರಿಹಾರ ನೀಡಬೇಕೆಂದು ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ಒತ್ತಾಯಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/03/2022 01:53 pm