ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಹೊತ್ತಿ ಉರಿದ 40ಕ್ಕೂ ಹೆಚ್ಚು ರಾಯಲ್ ಎನ್ ಫೀಲ್ಡ್ ಬೈಕ್‌ಗಳು

ಗದಗ: ಶೋ ರೂಮ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ರೂ. ಮೌಲ್ಯದ ಬೈಕ್​ಗಳು ಹೊತ್ತಿ ಉರಿದ ಘಟನೆ ಗದಗ-ಹುಬ್ಬಳ್ಳಿ ರಸ್ತೆಯಲ್ಲಿರುವ ರಾಯಲ್ ಎನ್ ಫೀಲ್ಡ್ ಶೋ ರೂಮ್​ನಲ್ಲಿ ಸಂಭವಿಸಿದೆ.

ವೀರೇಶ್ ಗುಗ್ಗರಿ ಎಂಬುವರಿಗೆ ಸೇರಿದ ಶೋ ರೂಮ್ ಇದಾಗಿದ್ದು, ಸುಮಾರು 40ಕ್ಕೂ ಹೆಚ್ಚು ರಾಯಲ್ ಎನ್ ಫೀಲ್ಡ್ ಬೈಕ್​ಗಳು ಬೆಂಕಿಗಾಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಯುಗಾದಿ ಹಬ್ಬದ ಹಿನ್ನೆಲೆ ಸುಮಾರು 30ಕ್ಕೂ ಹೆಚ್ಚು ಹೊಸ ಬೈಕ್​ಗಳನ್ನ ತಂದಿಡಲಾಗಿತ್ತು. ಅನೇಕರು ಬುಕ್ ಮಾಡಿ ಯುಗಾದಿ ಸಂಭ್ರಮದಂದು ತೆಗೆದುಕೊಂಡು ಹೋಗಲು ಮುಂದಾಗಿದ್ದರು. ಸ್ಥಳಕ್ಕೆ ಗದಗ ನಗರದ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

02/04/2022 11:24 am

Cinque Terre

109.38 K

Cinque Terre

1

ಸಂಬಂಧಿತ ಸುದ್ದಿ