ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಓರ್ವ ಪೊಲೀಸ್ ಕಾನ್ಸ್‌ಟೇಬಲ್ ಸೇರಿ ಇಬ್ಬರು ಸಾವು

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸ್‌ಟೇಬಲ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಬುಡನಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ.

ಕರ್ತವ್ಯದಲ್ಲಿದ್ದ ಕಲಘಟಗಿ ಪೊಲೀಸ್ ಠಾಣೆಯ ಪಂಡಿತ ಕಾಸರ್(28) ಎಂಬುವರು ಮೃತಪಟ್ಟ ಕಾನ್ಸ್‌ಟೇಬಲ್ ಎಂದು ತಿಳಿದು ಬಂದಿದೆ. ಮಳೆ, ಬಿರುಗಾಳಿಯಿಂದ ರಸ್ತೆಯಲ್ಲಿ ಮರಗಳು‌ ಬಿದ್ದಿದ್ದು, ಇದರಿಂದ ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By :
Kshetra Samachara

Kshetra Samachara

05/04/2022 11:04 pm

Cinque Terre

41.71 K

Cinque Terre

28

ಸಂಬಂಧಿತ ಸುದ್ದಿ