ಧಾರವಾಡ: ಉಪ್ಪಿನ ಬೆಟಗೇರಿ ಕಡೆಯಿಂದ ಪುಡಕಲಕಟ್ಟಿ ಮಾರ್ಗವಾಗಿ ಧಾರವಾಡ ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಕರಡಿಗುಡ್ಡ ಗ್ರಾಮದ ಬಳಿ ನಡೆದಿದೆ.
ಪುಡಕಲಕಟ್ಟಿ ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 35-40 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ಸು ಕರಡಿಗುಡ್ಡ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
Kshetra Samachara
09/04/2022 10:34 am