ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಡ್ಡಾದಿಡ್ಡಿ ಬಂದ ಕಾರು ಮೂರು ಬೈಕ್‌ಗಳಿಗೆ ಡಿಕ್ಕಿ

ಧಾರವಾಡ: ಅಡ್ಡಾದಿಡ್ಡಿಯಾಗಿ ಬಂದ ಕಾರೊಂದು ಎದುರಿಗೆ ಬರುತ್ತಿದ್ದ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಇರುವ ಇನಾಂಹೊಂಗಲದ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಸವದತ್ತಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದು ನಂತರ ಕಂದಕಕ್ಕೆ ಉರುಳಿದೆ.

ಘಟನೆಯಲ್ಲಿ ಕಾರು ಚಾಲಕ ಮತ್ತು ಬೈಕ್ ಸವಾರರೂ ಗಾಯಗೊಂಡಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Manjunath H D
Kshetra Samachara

Kshetra Samachara

16/04/2022 07:48 pm

Cinque Terre

64.62 K

Cinque Terre

4

ಸಂಬಂಧಿತ ಸುದ್ದಿ