ಧಾರವಾಡ: ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿಯಿದ್ದ ಕಾರೊಂದು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ್ದು, ಪವಾಡಸದೃಶ್ಯ ರೀತಿಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವೀಣಕುಮಾರ ಕಾರಿನಲ್ಲಿದ್ದವರು. ಬೆಳಗಿನ ಜಾವ 5.30 ಕ್ಕೆ ಈ ಘಟನೆ ನಡೆದಿದ್ದು, ಎಲ್ಲರನ್ನೂ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆ ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ವಿಜಯಮಹಾಂತೇಶ ದಾನಮ್ಮನವರ ಅವರ ವರ್ಗಾವಣೆ ಆದೇಶ ನಿನ್ನೆಯಷ್ಟೇ ಬಂದಿತ್ತು. ವಿಜಯಪುರ ಜಿಲ್ಲಾಧಿಕಾರಿಯಾಗಲು ಹೊರಟಿದ್ದ ಸಮಯದಲ್ಲಿಯೇ ಈ ದುರ್ಘಟನೆ ನಡೆದಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/04/2022 07:48 am