ಕುಂದಗೋಳ: ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ಮೇವು ತುಂಬಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟೇಲರ್‌ಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳವಾರ ನಡೆದಿದೆ.
ಹಿರೇಹರಕುಣಿ ಗ್ರಾಮದ ಶೇಖರಗೌಡ ಅಂದಾನಿಗೌಡ್ರ ಎಂಬುವರಿಗೆ ಸೇರಿದ ಟ್ರ್ಯಾಕ್ಟರ್ ಟೇಲರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯರು ತಂಡೋಪತಂಡವಾಗಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಬೆಂಕಿ ಹೊತ್ತಿ ಅರ್ಧಂಬರ್ಧ ಸುಟ್ಟು ಮೇವು ದನಕರುಗಳು ತಿನ್ನಲು ಯೋಗ್ಯವಿರದಂತಾಗಿದೆ. ಕುಂದಗೋಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
20/04/2022 11:04 pm