ಧಾರವಾಡ: ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಲಾರಿ ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದವರ ಹೆಸರು ಹಾಗೂ ವಿಳಾಸ ತಿಳಿದು ಬಂದಿದೆ.
ಸವದತ್ತಿ ಕಡೆಯಿಂದ ಬರುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಲಾರಿ ಎದುರಿಗೆ ಬರುತ್ತಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡದಿದೆ. ಇದರಿಂದ ಎರಡೂ ವಾಹನದ ಇಬ್ಬರು ಚಾಲಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಹುಬ್ಬಳ್ಳಿ ಬಿಡ್ನಾಳದ ಗಗನ್ ವಾಲೀಕಾರ (26) ಹಾಗೂ ಸವದತ್ತಿ ತಾಲೂಕಿನ ಉಳ್ಳಿಗೇರಿ ಗ್ರಾಮದ ಸಿದ್ದಪ್ಪ ತುರಾಯಿ (27) ಎಂಬುವವರೇ ಸ್ಥಳದಲ್ಲಿ ಸಾವನ್ನಪ್ಪಿದವರು.
ಅಪಘಾತವಾದ ಬಳಿಕ ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ದಟ್ಟನೆ ಉಂಟಾಗಿತ್ತು. ನಂತರ ಪೊಲೀಸರು ಕ್ರೇನ್ ಸಹಾಯದಿಂದ ಎರಡೂ ವಾಹನಗಳನ್ನು ತೆರವುಗೊಳಿಸಿದ ನಂತರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/04/2022 11:02 am