ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಸ್ತೆ ಮಧ್ಯೆ ಪಲ್ಟಿಯಾದ ಲಾರಿ

ಧಾರವಾಡ: ಬೈಕ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ ಧಾರವಾಡದ ಮಾಡರ್ನ್ ಹಾಲ್ ಬಳಿ ಸಂಭವಿಸಿದೆ.

ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ, ಎದುರಿಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದರು.

Edited By :
Kshetra Samachara

Kshetra Samachara

30/04/2022 12:12 pm

Cinque Terre

40.26 K

Cinque Terre

3

ಸಂಬಂಧಿತ ಸುದ್ದಿ