ಹುಬ್ಬಳ್ಳಿ: ಕಳೆದ ಎರಡು ದಿನಗಳ ಹಿಂದೆ ನಗರದ ತತ್ವದರ್ಶಿ ಆಸ್ಪತ್ರೆಯ ರೋಡ್ ಕಲ್ಲೂರ್ ಪೆಟ್ರೋಲ್ ಬಂಕ್ ಹತ್ತಿರ ನಡೆದ ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದ ಅಪಘಾತದ ವೀಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ನೀವು ದೃಶ್ಯಗಳಲ್ಲಿ ನೋಡ್ತಿರಬಹುದು, ನಾರಾಯಣ ಉಪ್ಪಾರ ಎಂಬ ಆಟೋ ಚಾಲಕ ವೇಗವಾಗಿದ್ದು, ಪಲ್ಟಿಯಾಗಿಯೇ ಕಾರಿಗೆ ಗುದ್ದಿದ್ದಾನೆ. ಇದು ಅಲ್ಲಿಯೇ ಇದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
03/05/2022 04:01 pm