ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಳೆ ಮಾಡಿದ ಅವಾಂತರ : ಮರ ಬಿದ್ದು ವ್ಯಕ್ತಿ ಸಾವು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಕಾಲಿಕವಾಗಿ ಸುರಿದ ಧಾರಾಕಾರ ಮಳೆಯು ಒಂದಿಲ್ಲೊಂದು ರೀತಿಯಲ್ಲಿ ಅವಾಂತರ ಸೃಷ್ಟಿಸಿದ್ದು, ಮಳೆಗೆ ಮರ ಬಿದ್ದಿರುವ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಮನೆಯ ಹತ್ತಿರದ ದೇಸಾಯಿ ಕ್ರಾಸ್ ನಲ್ಲಿ ನಡೆದಿದೆ.

ಬಿರುಗಾಳಿ ಸಹಿತ‌ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದಿರುವ ಪರಿಣಾಮ ಆಟೋದಲ್ಲಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ರೂಬಿ ಮೋರಿಸ್ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಹುಬ್ಬಳ್ಳಿ ದೇಸಾಯಿ ಕ್ರಾಸ್ ಬಳಿ ನಡೆದ ಘಟನೆಯಲ್ಲಿ ಇಂತಹದೊಂದು ದೊಡ್ಡ ಅಪಘಡ ಸಂಭವಿಸಿದೆ.

ಈಗಾಗಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸಾಕಷ್ಟು ಅವಘಡಗಳು ಸಂಭವಿಸಿದ್ದು, ಮತ್ತೋರ್ವ ಪ್ರಯಾಣಿಕರಿಗೆ ಗಾಯಗಳಾಗಿವೆ. ಇನ್ನೂ ಚಲಿಸುತ್ತಿದ್ದ ಕಾರಿನ ಮೇಲೆ‌ ಮರ ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ತಹಸೀಲ್ದಾರ ಶಶಿಧರ್ ಮಾಡ್ಯಾಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Edited By : Nirmala Aralikatti
Kshetra Samachara

Kshetra Samachara

04/05/2022 09:25 pm

Cinque Terre

28.51 K

Cinque Terre

3

ಸಂಬಂಧಿತ ಸುದ್ದಿ