ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ವ್ಯಕ್ತಿ ಬಲಿ, ಸ್ಥಳೀಯರ ಆಕ್ರೋಶ

ನವಲಗುಂದ: ನವಲಗುಂದ ಪಟ್ಟಣದಲ್ಲಿ ಹಾದುಹೋಗುವ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ನವೀನ ಪಾರ್ಕ್ ಬಳಿ ಪಾದಚಾರಿಯೊಬ್ಬರ ಮೇಲೆ ಲಾರಿ ಹರಿದಿದೆ. ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಗುರುವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿ ನವಲಗುಂದ ನಿವಾಸಿಯಾಗಿದ್ದು, 64 ವರ್ಷ ವಯಸ್ಸಿನ ಅಂದಾನಿಗೌಡ್ರ ವೆಂಕನಗೌಡ್ರ ಕಲ್ಲನಗೌಡ್ರ ಎಂದು ಹೇಳಲಾಗುತ್ತಿದೆ. ಘಟನೆ ನಡೆಯುತ್ತಿದ್ದಂತೆ ನವಲಗುಂದ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ್ ಮಠಪತಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಮೃತ ದೇಹವನ್ನು ಸ್ಥಳಾಂತರಿಸಿದ್ದಾರೆ.

ಘಟನೆ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಿಪಿಐ ಚಂದ್ರಶೇಖರ್ ಮಠಪತಿ ಪರಿಶೀಲನೆ ನಡೆಸಿದ್ದಾರೆ.

Edited By :
Kshetra Samachara

Kshetra Samachara

12/05/2022 07:33 pm

Cinque Terre

70.36 K

Cinque Terre

2

ಸಂಬಂಧಿತ ಸುದ್ದಿ