ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಮರಕ್ಕೆ ಕ್ರೂಸರ್ ಡಿಕ್ಕಿ: ಸ್ಥಳದಲ್ಲೇ ಏಳು ಜನ ಸಾವು!

ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ‌ ನಡೆದಿದೆ.

ಅಪಘಾತದಲ್ಲಿ ಆರು ಜನರಿಗೆ ಗಂಭೀರ ಗಾಯಗೊಂಡಿದ್ದು, ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನ ಬರುತ್ತಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ ದಾಖಲು ಮಾಡಲಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನಸೂರ ಗ್ರಾಮದಿಂದ ನಿಗದಿ (ಬೆನಕನಕಟ್ಟಿ) ಗೆ ಹೋಗುವಾಗ ಈ ಘಟನೆ ನಡೆದಿದೆ. ಒಟ್ಟು 7 ಜನ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಸಂಭವಿಸಿದೆ.

ಸಧ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆ ಹಾಕುತಿದ್ದಾರೆ. ಇನ್ನು ಅನನ್ಯ 14, ಹರೀಶ 13, ಶಿಲ್ಪಾ 34, ನೀಲವ್ಚ 60, ಮಧುಶ್ರೀ 20 ಮಹೇಶ್ವರಯ್ಯ 11, ಶಂಭುಲಿಂಗಯ್ಯ 35, ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

21/05/2022 07:37 am

Cinque Terre

180.04 K

Cinque Terre

20

ಸಂಬಂಧಿತ ಸುದ್ದಿ