ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಭೀಕರ ಅಪಘಾತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಧಾರವಾಡ: ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಕ್ರೂಸರ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಸ್ಥಳದಲ್ಲೇ 7 ಜನ ಸಾವನ್ನಪ್ಪಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಇನ್ನೂ ಕೆಲವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಅದರಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರು ಅಸುನೀಗಿದ್ದಾರೆ.

ಅನನ್ಯ, ಹರೀಶ್, ಶಿಲ್ಪಾ, ನೀಲವ್ವ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ, ಮನುಶ್ರೀ ಹಾಗೂ ಚೆನ್ನವ್ವ ದಾಸನಕೊಪ್ಪ ಎಂಬುವವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮನಸೂರಿನ ರೇವಣಸಿದ್ದೇಶ್ವರ ಮಠದಲ್ಲಿ ನಿನ್ನೆ ರಾತ್ರಿ ನಿಶ್ಚಿತಾರ್ಥ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.

Edited By :
Kshetra Samachara

Kshetra Samachara

21/05/2022 12:20 pm

Cinque Terre

63.38 K

Cinque Terre

10

ಸಂಬಂಧಿತ ಸುದ್ದಿ