ನವಲಗುಂದ : ತಾಲ್ಲೂಕಿನ ಗೊಬ್ಬರಗುಂಪಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಗೊಬ್ಬರಗುಂಪಿ ಗ್ರಾಮದ ಹಾಲಪ್ಪ ಪೂಜಾರ ಎಂಬ ವ್ಯಕ್ತಿ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನಿಗಿದ್ದಾನೆ.
ಹುಬ್ಬಳ್ಳಿ ವಿಜಯಪೂರ ರಾಷ್ಟ್ರೀಯ ಹೆದ್ದಾರಿಯ ಗೊಬ್ಬರಗುಂಪಿ ಕ್ರಾಸ್ ಬಳಿ ಎರಡು ಬೈಕ್ ಗಳ ಮದ್ಯ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಗಂಭೀರ ಗಾಯಗೊಂಡ ನಾಲ್ವರಿಗೆ ನವಲಗುಂದ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು.
ಹುಬ್ಬಳ್ಳಿ ಕಿಮ್ಸ್ ನಲ್ಲಿ ಗೊಬ್ಬರಗುಂಪಿ ಗ್ರಾಮದವನಾದ ಹಾಲಪ್ಪ ಪೂಜಾರ (53) ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣದ ತನಿಖೆ ಮುಂದುವರೆದಿದೆ.
Kshetra Samachara
23/05/2022 09:22 pm