ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯು ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ತೊಂದರೆ ಆಗದಂತೆ ಸೂಕ್ತ ಕಾರ್ಯಾಚರಣೆಗೆ ಮುಂದಾಗಿದೆ. ಆದರೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾತ್ರ ಎಲ್ಲೆಂದರಲ್ಲಿ ವಿದ್ಯುತ್ ಟ್ರಾನ್ಸಫಾರ್ಮ್ ಬೆಂಕಿ ಹತ್ತಿ ಜನರಲ್ಲಿ ಆತಂಕವನ್ನು ಹುಟ್ಟು ಹಾಕಿದೆ.
ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ ಸಾರ್ವಜನಿಕ ಗ್ರಂಥಾಲಯದ ಹಿಂದಿರುವ ವಿದ್ಯುತ್ ಟ್ರಾನ್ಸಫಾರ್ಮ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗ್ರಂಥಾಲಯದಲ್ಲಿ ಓದುತ್ತಾ ಕುಳಿತಿದ್ದವರು ಭಯಭೀತರಾಗಿ ಹೊರಗೆ ಓಡಿ ಬಂದಿದ್ದಾರೆ.
ಈಗಾಗಲೇ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಟ್ರಾನ್ಸಫಾರ್ಮ್ ಕಾರ್ಯಾಚರಣೆಗೆ ಮುಂದಾಗಿದೆ. ಆದರೆ ವ್ಯವಸ್ಥಿತವಾಗಿ ನಿರ್ವಹಣೆ ಮಾಡದೇ ಇರುವುದು ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Kshetra Samachara
24/05/2022 07:11 pm