ನವಲಗುಂದ: ತಾಲ್ಲೂಕಿನ ಅಮರಗೋಳದ ಬಳಿ ಹಾದು ಹೋಗುವ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಒಬ್ಬ ಮೃತ ಪಟ್ಟಿದ್ದಾನೆ.
ಇನ್ನು ಅಪಘಾತಕ್ಕೊಳಗಾದ ವ್ಯಕ್ತಿ ಯಾರು ಎಂಬುದು ಇನ್ನೂ ತಿಳಿದು ಬಂದಿಲ್ಲ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಸಿಪಿಐ ಚಂದ್ರಶೇಖರ್ ಮಠಪತಿ ಹಾಗೂ ಪಿಎಸ್ಐ ಕಲ್ಮೇಶ್ ಬೆನ್ನೂರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Kshetra Samachara
24/05/2022 10:51 pm