ಹುಬ್ಬಳ್ಳಿ: ಹುಬ್ಬಳ್ಳಿ ಬೈಪಾಸ್ ರಸ್ತೆಯಲ್ಲಿ ಬೊಲೆರೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಮೂವರನ್ನು ಕಾಂಗ್ರೆಸ್ ಮುಖಂಡ ಅನಿಲ್‌ಕುಮಾರ ಪಾಟೀಲ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಅಪಘಾತದಲ್ಲಿ ಪುಟ್ಟ ಮಗು ಸೇರಿದಂತೆ ಮೂವರು ಗಾಯಗೊಂಡಿದ್ದರು. ಇದೇ ಮಾರ್ಗವಾಗಿ ಹೋಗುತ್ತಿದ್ದ ಅನಿಲ್‌ಕುಮಾರ ಪಾಟೀಲ್ ಅವರು ತಮ್ಮ ವಾಹನದಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆನಂದ ಮಾದರ ಸಾವನ್ನಪ್ಪಿದ್ದು, ಪುಟ್ಟ ಮಗು ಹಾಗೂ ಆನಂದ ಅವರ ಸಹೋದರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಯುವಕನ ಸಾವಿಗೆ ಅನಿಲ್‌ಕುಮಾರ ಪಾಟೀಲ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
Kshetra Samachara
27/05/2022 10:17 pm