ಅಣ್ಣಿಗೇರಿ: ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯೆ ಬರುವ ನಲವಡಿ ಟೋಲ್ ನಾಕಾ ಬಳಿ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ರಾಯಚೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ರಾಂಗ್ ರೂಟನಲ್ಲಿ ಬಂದು ಡಿವೈಡರ್ ಗೆ ಡಿಕ್ಕಿಯಾಗಿದೆ. ಇನ್ನು ಈ ಅವಫಾತಕ್ಕೆ ಚಾಲಕನ ಅಜಾಗ್ರತೆಯೇ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆ ಕುರಿತು ಸಾರ್ವಜನಿಕರು ಪೊಲೀಸ್ ಠಾಣೆಗೆ ಕರೆ ಮಾಡಿ ಸುದ್ದಿ ತಿಳಿಸಿದ್ದಾರೆ.
Kshetra Samachara
31/05/2022 08:33 pm