ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಕುಸುಗಲ್ ರಸ್ತೆಯಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಗದಗ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಓವರ್ ಟೇಕ್ ಮಾಡಲು ಹೋದ ಟಿಪ್ಪರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದು, ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನೂ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಅಪಘಾತದಲ್ಲಿ ಗಾಯಗೊಂಡವರ ಬಗ್ಗೆ ಹಾಗೂ ಮೃತ ಬೈಕ್ ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನೆ ಹುಬ್ಬಳ್ಳಿ ಪೂರ್ವ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Kshetra Samachara
01/06/2022 09:59 pm