ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಮುಂದೆ ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ದುರಂತವೊಂದು ತಪ್ಪಿದಂತಾಗಿದೆ.
ಎರಡೂ ಕಾರು ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಒಂದು ಕಾರು ಬುಡಮೇಲಾಗಿ ಬಿದ್ದಿದೆ. ಮತ್ತೊಂದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
03/06/2022 08:08 pm