ಧಾರವಾಡ: ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕ್ಯಾರಕೊಪ್ಪ ರೈಲ್ವೆ ಗೇಟ್ ಬಳಿ ನಡೆದಿದೆ.
ಬೈಕ್ ಸವಾರರು ಧಾರವಾಡದಿಂದ ಕ್ಯಾರಕೊಪ್ಪಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಸುರೇಶ ಕಲ್ಲಕನ್ನಿ ಹಾಗೂ ಬಸ್ಸು ಸರಾವರಿ ಎಂಬುವವರು ಗಾಯಗೊಂಡಿದ್ದಾರೆ.
ಇನ್ನು ಈ ಅಪಘಾತ ನಡೆಯುತ್ತಿದ್ದಂತೆ ಗಾಯಗೊಂಡ ಬೈಕ್ ಸವಾರರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Kshetra Samachara
16/06/2022 10:51 pm