ನವಲಗುಂದ : ನವಲಗುಂದದಿಂದ ನರಗುಂದಕ್ಕೆ ತೆರಳುವ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಬೆಣ್ಣೆ ಹಳ್ಳದ ಸೇತುವೆ ಬಳಿ ಗುರುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಬೈಕ್ ಸವಾರನಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡ ವ್ಯಕ್ತಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಲ್ಬರ್ಗಾ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕುಕನೂರ್ ಗ್ರಾಮದ ಇಪ್ಪತ್ತೆರಡು ವರ್ಷ ವಯಸ್ಸಿನ ನಿಂಗಣ್ಣ ಶರನಗೌಡ ಬಿರಾದಾರ್ ಎಂಬುವವರೇ ಗಾಯಗೊಂಡವರು. ಇವರನ್ನ ಪ್ರಥಮ ಚಿಕಿತ್ಸೆಗಾಗಿ ನವಲಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಘಟನೆ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Kshetra Samachara
17/06/2022 01:59 pm