ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಪರಿಚಿತ ವಾಹನ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೇ ಸಾವು

ಧಾರವಾಡ: ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ಬಳಿ ಸಂಭವಿಸಿದೆ.

ಧಾರವಾಡದಿಂದ ಯಡಹಳ್ಳಿ ಗ್ರಾಮದ ಕಡೆ ಬೈಕ್ ತೆಗೆದುಕೊಂಡು ಬರುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋಗಿದೆ. ಇದರಿಂದ ಯಡಹಳ್ಳಿ ಗ್ರಾಮದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Vijay Kumar
Kshetra Samachara

Kshetra Samachara

19/06/2022 08:06 pm

Cinque Terre

39.81 K

Cinque Terre

0

ಸಂಬಂಧಿತ ಸುದ್ದಿ