ಧಾರವಾಡ: ಹುಬ್ಬಳ್ಳಿ, ಧಾರವಾಡ ಬೈಪಾಸ್ ರಸ್ತೆಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತ ನಡೆಯುತ್ತಲೇ ಇವೆ. ಇಂದು ಬೆಳಗಿನಜಾವ ಕೂಡ ಗೂಡ್ಸ್ ಲಾರಿಯೊಂದು ಪಲ್ಟಿಯಾಗಿದೆ.
ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
Kshetra Samachara
23/06/2022 05:42 pm