ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಧಾರವಾಡದಲ್ಲಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ: ಚಾಲಕ ಸೇರಿ ಇಬ್ಬರು ದುರ್ಮರಣ?

ಧಾರವಾಡ: ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿದ ಪರಿಣಾಮ ಚಾಲಕ ಸೇರಿ ಇಬ್ಬರು ಸುಟ್ಟು ಕರಕಲಾಗಿರುವ ಘಟನೆ ಧಾರವಾಡದ ರಮ್ಯ ರೆಸಿಡೆನ್ಸಿ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಕಡೆಗೆ ಪೆಟ್ರೋಲ್ ತುಂಬಿಕೊಂಡು ಹೊರಟಿದ್ದ ಟ್ಯಾಂಕರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಬೆಂಕಿ ಹೊತ್ತಿಕೊಂಡು ಚಾಲಕ ಸೇರಿದಂತೆ ಇಬ್ಬರು ಸುಟ್ಟು ಕರಕಲಾಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

29/06/2022 10:06 pm

Cinque Terre

43.88 K

Cinque Terre

6

ಸಂಬಂಧಿತ ಸುದ್ದಿ