ಅಣ್ಣಿಗೇರಿ: ಆಟೋ ಅಡ್ಡ ಬಂದ ಪರಿಣಾಮ ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟು ಕರಕಲಾಗಿದೆ. ಅಣ್ಣಿಗೇರಿ ಪಟ್ಟಣದ ತಹಶೀಲ್ದಾರ್ ಕಚೇರಿ ಬಳಿ ಈ ಘಟನೆ ನಡೆದಿದೆ.
ಪಟ್ಟಣದ ಹೊರವಲಯದ ತಹಸೀಲ್ದಾರ್ ಕಚೇರಿ ಎದುರು ಹುಬ್ಬಳ್ಳಿಯಿಂದ ಸಿಂಧನೂರಿಗೆ ಹೊರಟಿದ್ದ ಸ್ವಿಪ್ಟ್ ಕಾರಿಗೆ ಆಟೋ ಅಡ್ಡ ಬಂದಿದೆ.ಆದ್ರೆ ಅಪಘಾತ ತಪ್ಪಿಸಲು ಹೋದ ಕಾರ್ ಚಾಲಕ ನಿಯಂತ್ರಣ ತಪ್ಪಿ, ಡಿವೈಡರ್‌ಗೆ ಗುದ್ದಿದ್ದಾನೆ. ಡಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ಸುಟ್ಟು ಕರಕಲಾಗಿದೆ.
ಪಲ್ಟಿ ಹೊಡೆಯುತ್ತಿದ್ದಂತೆ ಕಾರಿನ ಮುಂಭಾಗ ಹೊತ್ತಿಕೊಳ್ಳುತ್ತಿದಂತೆ ಕಾರಿನಲ್ಲಿ ನಾಲ್ವರು ಹೊರ ಬಂದಿದ್ದಾರೆ. ನಾಲ್ವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣಕ್ಕೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಗಾಯಾಳುಗಳು ಅಣ್ಣಿಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
02/07/2022 10:33 am