ಧಾರವಾಡ: ಕಾರು ಹಾಗೂ ಬೈಕಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ಕೆಸಿ ಪಾರ್ಕ್ ಬಳಿ ಸಂಭವಿಸಿದೆ.
ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತಪಟ್ಟವನ ಹೆಸರು, ವಿಳಾಸ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
02/07/2022 04:16 pm