ಧಾರವಾಡ: ಹುಬ್ಬಳ್ಳಿ, ಧಾರವಾಡ ಮಧ್ಯೆ ಇರುವ ಕಿಲ್ಲರ್ ಬೈಪಾಸ್‌ನಲ್ಲಿ ದಿನೇ ದಿನೆ ಅಪಘಾತಗಳು ಹೆಚ್ಚಾಗುತ್ತಿದ್ದು, ಈ ರಸ್ತೆ ಈಗಾಗಲೇ ಸಾವಿನ ರಸ್ತೆ ಎಂದು ಹೆಸರು ಪಡೆದಿದೆ. ಈಗಷ್ಟೇ ಮತ್ತೆ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಚಾಲಕರಿಬ್ಬರೂ ಸಾವಿಗೀಡಾಗಿದ್ದಾರೆ!
ಬೆಳಗಾವಿ ಕಡೆಯಿಂದ ಬರುತ್ತಿದ್ದ ಹಾಗೂ ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಎರಡು ಲಾರಿಗಳ ಮಧ್ಯೆ ಯರಿಕೊಪ್ಪದ ಬಳಿ ಭೀಕರ ಅಪಘಾತವಾಗಿದ್ದು, ಚಾಲಕರಿಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಈ ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಮಧ್ಯೆ ಸಿಲುಕಿದ್ದ ಶವಗಳನ್ನು ಪೊಲೀಸರು ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/07/2022 10:42 pm