ಹುಬ್ಬಳ್ಳಿ: ವಿಭೂತಿ ಪಾಲ್ಸ್ ನೋಡಲು ಹೋಗಿದ್ದ ಹುಬ್ಬಳ್ಳಿಯ ಯುವಕರು ರಸ್ತೆ ಅಪಘಾತದಲ್ಲಿ ಸಿಕ್ಕಿ ಸಾವನ್ನಪ್ಪಿದ ಘಟನೆ ಯಲ್ಲಾಪುರದ ಗುಳ್ಳಾಪುರ ಹಾಗೂ ಕೂಡ್ಲ ಗದ್ದೆ ನಡುವೆ ಘಟನೆ ಇತ್ತೀಚಿಗೆ ನಡೆದಿದೆ.
ಬೈಕ್ ಹಾಗೂ ಲಾರಿ ಮಧ್ಯ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿಯ ಇಬ್ಬರೂ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಸಹದೇವ ನಗರದ ಸುನೀಲ್ ಬಸವಾ ಹಾಗೂ ಆತನ ಸ್ನೇಹಿತ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೂ ಈ ಕುರಿತು ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಯಲ್ಲಾಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು, ಯುವಕರು ಸಾವನ್ನಪ್ಪಿದ್ದಾರೆ. ಈ ಕುರಿತು ಯಲ್ಲಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/07/2022 10:38 pm