ಧಾರವಾಡ: ಆಟೋ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಮೂವರು ಗಾಯಗೊಂಡ ಘಟನೆ ಹುಬ್ಬಳ್ಳಿ, ಧಾರವಾಡ ಬೈಪಾಸ್ ಮಧ್ಯೆ ಸಂಭವಿಸಿದೆ.
ಹುಬ್ಬಳ್ಳಿಯ ಗೋಕುಲಕ್ಕೆ ಹೋಗುತ್ತಿದ್ದ ಕಾರು, ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಕಡೆಗೆ ಹೊರಟಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ರಸ್ತೆ ಬಿಟ್ಟು ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ.
ಇದರಿಂದ ಆಟೋದಲ್ಲಿದ್ದ ಭೀಮವ್ವ ನೇಕಾರ ಎಂಬ ವಯೋವೃದ್ಧೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಇನ್ನು ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗ ಕೂಡ ಜಖ್ಖಂಗೊಂಡಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/07/2022 03:58 pm