ಧಾರವಾಡ: ರಾಸಾಯನಿಕ ದ್ರವ್ಯ ಹೊತ್ತು ಸಾಗುತ್ತಿದ್ದ ಟ್ಯಾಂಕರ್‌ವೊಂದು ಪಲ್ಟಿಯಾಗಿರುವ ಘಟನೆ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಬಳಿ ಸಂಭವಿಸಿದೆ.
ಬೇಲೂರು ಕೈಗಾರಿಕಾ ಪ್ರದೇಶದಿಂದ ರಾಸಾಯನಿಕ ದ್ರವ್ಯವನ್ನು ಈ ಟ್ಯಾಂಕರ್ ಹೊತ್ತು ಸಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣ, ಪುಟ್ಟ ಗಾಯಗಳಾಗಿದ್ದು, ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
16/07/2022 03:24 pm