ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ, ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಗಾಂಧಿ ಕಟ್ಟಿ ಬಳಿ ನಡೆದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೌದು ನಿನ್ನೆ (ಗುರುವಾರ) ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ, ನವಲಗುಂದ ಕಡೆಯಿಂದ ಹುಬ್ಬಳ್ಳಿಗೆ ಸಾಗುತ್ತಿದ್ದ ಉಸುಕು ತುಂಬಿದ ಲಾರಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕವಿರುವ ಕಂದಕಕ್ಕೆ ಬಿದ್ದಿದೆ.
ಇನ್ನೂ ಲಾರಿ ಬಿಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರಸ್ತೆ ಪಕ್ಕದಲ್ಲೇ ಹೊರಟ್ಟಿದ್ದ ರೈತ ಕೂದಲೆಳೆ ಅಂತರದಿಂದ ಪಾರಾಗಿದ್ದಾನೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/07/2022 11:48 am