ಹುಬ್ಬಳ್ಳಿ: ಬರ್ತ್ ಡೇ ಸಮಾರಂಭದಲ್ಲಿ ಹಚ್ಚುವ ಸ್ಪಾರ್ಕರ್ಸ್ ಸಾಮಗ್ರಿಗಳನ್ನು ತಯಾರಿಸುವ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮ ನಾಲ್ವರು ಬೆಂಕಿಗೆ ಆಹುತಿಯಾಗಿದ್ದಾರೆ ಎಂಬ ಮಾಹಿತಿ ಇದೆ.
ಸಭೆ ಸಮಾರಂಭಗಳಲ್ಲಿ ಲೈಟರ್ ಮೂಲಕ ಹೊತ್ತಿಸುವ ಸ್ಪಾರ್ಕರ್ ತಯಾರಿಸುವ ಘಟಕಕ್ಕೆ ಬೆಂಕಿ ತಗುಲಿದ್ದು, ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕಿನ್ನಾಲಿಗೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಹುಬ್ಬಳ್ಳಿಯ ಹೊರವಲಯದಲ್ಲಿರುವ ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದ ಮೊದಲ ಕ್ರಾಸ್‌ನಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಂಬ್ಯುಲೆನ್ಸ್ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣೆಗೆ ಮುಂದಾಗಿದ್ದಾರೆ. ಇನ್ನು ದುರಂತದದಲ್ಲಿ ಸಾವನ್ನಪ್ಪಿದವರ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇತ್ತೀಚೆಗಷ್ಟೇ ಆರಂಭವಾಗಿದ್ದ ಸ್ಪಾರ್ಕರ್ಸ್ ಘಟಕದಲ್ಲಿ ಘಟನೆಗೆ ನೈಜ ಕಾರಣ ತಿಳಿದುಬರಬೇಕಿದೆ.
Kshetra Samachara
23/07/2022 05:57 pm