ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ತಾರಿಹಾಳ ದುರಂತ- ಗಾಯಾಳು ಕಿಮ್ಸ್‌ಗೆ ರವಾನೆ

ಹುಬ್ಬಳ್ಳಿ: ಹುಬ್ಬಳ್ಳಿಯ ಹೊರವಲಯದಲ್ಲಿರುವ ತಾರಿಹಾಳ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಇಂದು ಸಂಜೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಂಬ್ಯುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹೌದು. ಈಗಾಗಲೇ ನಾಲ್ಕಕ್ಕೂ ಹೆಚ್ಚು ಜನರು ಅಗ್ನಿಗೆ ಆಹುತಿಯಾಗಿದ್ದಾರೆ ಎಂಬ ಮಾಹಿತಿ ಸಿಗುತ್ತಿದ್ದಂತೆ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ.

ಇನ್ನೂ ಕೆಲವು ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

Edited By : Shivu K
Kshetra Samachara

Kshetra Samachara

23/07/2022 06:16 pm

Cinque Terre

43.82 K

Cinque Terre

0

ಸಂಬಂಧಿತ ಸುದ್ದಿ