ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹೊಸೂರು ವೃತ್ತದ ಬಳಿ ಭೀಕರ ರಸ್ತೆ ಅಪಘಾತ: ಓರ್ವ ಸಾವು

ಹುಬ್ಬಳ್ಳಿ: ಹುಬ್ಬಳ್ಳಿಯ ಜನನಿಬಿಡ ಪ್ರದೇಶವಾದ ಹೊಸೂರ್ ಸರ್ಕಲ್ ಬಳಿ ಲಾರಿ ಹಾಗೂ ಡಿಯೋ ಸ್ಕೂಟಿ ಅಪಘಾತ ನಡೆದು ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಹಳೆ ಹುಬ್ಬಳ್ಳಿಯ ಬೀರಬಂದ್ ಗಲ್ಲಿ ನಿವಾಸಿ ಪೈಜಾಲ್ ಧಾರವಾಡ ಮೃತಪಟ್ಟ ದುರ್ದೈವಿ ಆಗಿದ್ದು ಲಾರಿ ಚಾಲಕ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದು ಬಂದಿದೆ, ಅಪಘಾತದ ರಭಸಕ್ಕೆ ತಲೆಗೆ ಗಂಭೀರ ಗಾಯವಾಗಿದ್ದರಿಂದ ಪೈಜಾಲ್ ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಶವಾಗರಕ್ಕೆ ರವಾನಿಸಲಾಗಿದ್ದು ಉತ್ತರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

27/07/2022 09:09 am

Cinque Terre

33.22 K

Cinque Terre

13

ಸಂಬಂಧಿತ ಸುದ್ದಿ