ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ಹುಬ್ಬಳ್ಳಿ: ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಈ ಘಟನೆ ಹುಬ್ಬಳ್ಳಿ ಹೊರ ವಲಯದ ಗಬ್ಬೂರು ಕ್ರಾಸ್ ಬಳಿ ನಡೆದಿದೆ.

ಇಂದು ಮಧ್ಯಾಹ್ನ ಹುಬ್ಬಳ್ಳಿ ತಾಲೂಕಿನ ಪರಸಾಪುರ ಗ್ರಾಮದ ಜಾಫರ್ ಎಂಬಾತ ಬೈಕ್ ಮೇಲೆ ಹುಬ್ಬಳ್ಳಿಯತ್ತ ಬರುತ್ತಿದ್ದಾಗ ಗಬ್ಬುರು ಕ್ರಾಸ್ ಬಳಿಯಲ್ಲಿ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಜಾಫರ್ ಗಂಭೀರವಾಗಿ ಗಾಯಗೊಂಡಿದ್ದ.

ಕೂಡಲೇ ಆತನನ್ನು ಸ್ಥಳೀಯರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಕೂಡಾ ಜಾಫರ್ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಅಸುನೀಗಿದ್ದು,ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
Kshetra Samachara

Kshetra Samachara

30/07/2022 08:22 pm

Cinque Terre

76.77 K

Cinque Terre

4

ಸಂಬಂಧಿತ ಸುದ್ದಿ