ಅಣ್ಣಿಗೇರಿ: ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯೆ ಬರುವ ಅಣ್ಣಿಗೇರಿ ಪಟ್ಟಣದ ಹೊರವಲಯದ ಆರ್ಯರ ಹಳ್ಳದ ಹತ್ತಿರ ಗದಗ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುವ ವೇಳೆ ಟ್ಯಾಂಕರ್ ಲಾರಿಯೊಂದು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ರಸ್ತೆಯ ಪಕ್ಕದಲ್ಲಿರುವ ಜಮೀನಿನಲ್ಲಿ ಬಿದ್ದ ಘಟನೆ ಇಂದು ನಡೆದಿದೆ.
ಇನ್ನು ಚಾಲಕನ ಅಜಾಗ್ರತೆಯಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಣ್ಣಿಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
31/07/2022 09:19 pm