ಹುಬ್ಬಳ್ಳಿ: ಮನೆಗೆ ಬಣ್ಣ ಹಚ್ಚುವ ವೇಳೆ ಏಣಿಯಿಂದ ಪೇಂಟರ್ ಆಯತಪ್ಪಿ ಬಿದ್ದಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಸಂಜೆ ನಡೆದಿದೆ.
ಹುಬ್ಬಳ್ಳಿಯ ನೇಕಾರ ನಗರದಲ್ಲಿ ಮನೆಯೊಂದಕ್ಕೆ ಬಣ್ಣ ಹಚ್ಚುತ್ತಿದ್ದಾಗ ಪೇಂಟರ್ ಆಸೀಫ್ ಲಾಲ್ ಮೊಯಿನ್ ಏಣಿಯಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ ತಲೆ, ಹಾಗೂ ಕತ್ತಿನ ಭಾಗಕ್ಕೆ ಗಂಭೀರ ಏಟಾಗಿ ಅಸ್ವಸ್ಥನಾಗಿದ್ದ.
ಕೂಡಲೇ ಸ್ಥಳೀಯರು ಗಾಯಗೊಂಡ ಆಸೀಫ್‌ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ, ಕಸಬಾಪೇಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kshetra Samachara
03/08/2022 10:31 pm