ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ವಾಹನ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು

ಅಣ್ಣಿಗೇರಿ: ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊಲ್ಲಾಪುರ್ ಹುಬ್ಬಳ್ಳಿ ರಸ್ತೆಯ ಕಾಲವಾಡ ಗ್ರಾಮದ ಹತ್ತಿರ 50ರಿಂದ 55 ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬ ನಡೆದುಕೊಂಡು ಹೋಗುತ್ತಿದ್ದ ವೇಳೆ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾನೆ. ಈ ವಾಹನ ನವಲಗುಂದದಿಂದ ಹುಬ್ಬಳ್ಳಿ ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಚಾಲಕನ ಅಜಾಗರೂಕತೆಯಿಂದ ಅಪರಿಚಿತ ವ್ಯಕ್ತಿಯ ಜೀವ ಹೋಗಿದೆ. ನಂತರ ಚಾಲಕ ವಾಹನ ಸಮೇತ ಅಲ್ಲಿಂದ ಪರಾರಿಯಾಗಿದ್ದಾನೆ.

ಅಣ್ಣಿಗೇರಿ ಪೊಲೀಸ್ ಠಾಣೆ ಪಿಎಸ್ಐ ಲಾಲ್ ಸಾಬ್ ಜೂಲಕಟ್ಟಿ ಹಾಗೂ ಸಿಬ್ಬಂದಿ ಸಂತೋಷ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

04/08/2022 07:37 pm

Cinque Terre

24.77 K

Cinque Terre

3

ಸಂಬಂಧಿತ ಸುದ್ದಿ