ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗದಗ ರಸ್ತೆಯಲ್ಲಿ ಕಾರುಗಳ ನಡುವೆ ಅಪಘಾತ

ಹುಬ್ಬಳ್ಳಿ: ನಗರದ ಗದಗ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಎರಡು ಕಾರುಗಳು ಜಖಂಗೊಂಡ ಘಟನೆ ಶನಿವಾರ ನಡೆದಿದೆ.

ಬೆಂಗಳೂರಿನಿಂದ ಗದಗ ನಗರಕ್ಕೆ ಕಂಪ್ಯೂಟರ್ ಸಾಮಗ್ರಿಗಳನ್ನು ಸಾಗಾಟ ಮಾಡುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಕಾರುಗಳು ಜಖಂಗೊಂಡಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು,ಎರಡು ವಾಹನಗಳನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Edited By : Somashekar
Kshetra Samachara

Kshetra Samachara

06/08/2022 08:07 pm

Cinque Terre

91.24 K

Cinque Terre

0

ಸಂಬಂಧಿತ ಸುದ್ದಿ