ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಟ್ರ್ಯಾಕ್ಟರ್ ಹಾಗೂ ಬೈಕ್ ಅಪಘಾತ, ಓರ್ವ ಸಾವು

ನವಲಗುಂದ: ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದ ಬಳಿ ಗುರುವಾರ ರಾತ್ರಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್‌ನ ಹಿಂಬದಿ ಕುಳಿತಿದ್ದ ಓರ್ವ ಮೃತ ಪಟ್ಟಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನವಲಗುಂದ ತಾಲೂಕಾ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಗುಡಿಸಾಗರ ಗ್ರಾಮದ ಗುಂಡುಲಿಂಗೇಶ್ವರ ದೇವಸ್ಥಾನದ ಬಳಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ದುರ್ದೈವಿಯನ್ನು ಸುಮಾರು 37 ವರ್ಷ ವಯಸ್ಸಿನ ಬಸವರಾಜ್ ಮಲ್ಲಿಕಾರ್ಜುನ ಪಟ್ಟೆದ ಎಂದು ಗುರುತಿಸಲಾಗಿದೆ.

ಬೈಕ್‌ನ ಹಿಂಬದಿ ಕುಳಿತ ಬಸವರಾಜ್ ಮೃತ ಪಟ್ಟಿದ್ದಾನೆ. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Edited By : Nagaraj Tulugeri
Kshetra Samachara

Kshetra Samachara

12/08/2022 11:23 am

Cinque Terre

50.25 K

Cinque Terre

1

ಸಂಬಂಧಿತ ಸುದ್ದಿ