ನವಲಗುಂದ: ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಸುರಿದ ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದ ಪರಿಣಾಮ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನವಲಗುಂದ ತಾಲ್ಲೂಕಿನ ನಡೆದಿದೆ.
ತಾಲ್ಲೂಕಿನ ನಾಗನೂರು ಗ್ರಾಮದ ಬೆಟಗೇರಿ ಎಂಬುವರ ಮನೆ ಹಲವು ದಿನಗಳಿಂದ ಸುರಿದ ಬಾರಿ ಮಳೆಯಿಂದಾಗಿ ಗೋಡೆಗಳು ನೆನೆದು ಇಂದು ಸಾಯಂಕಾಲ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದ ಶೀಲಾರಬಿ ಬೆಟಗೇರಿ ಎಂಬ ವೃದ್ಧೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ವೃದ್ಧೆಯನ್ನು ನವಲಗುಂದ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kshetra Samachara
13/08/2022 10:07 pm