ಹುಬ್ಬಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಹೊರವಲಯದ ಗದಗ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಗದಗ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಿಯಾ ಕಾರು ಹಾಗೂ ಹುಬ್ಬಳ್ಳಿಯಿಂದ ಗದಗ ಕಡೆಗೆ ಹೋಗುತ್ತಿದ್ದ ಇಂಡಿಕಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರುಗಳು ಜಖಂಗೊಡಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುವನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತವಾದ ಎರಡು ಕಾರುಗಳನ್ನು ಪೂರ್ವ ಸಂಚಾರಿ ಪೊಲೀಸ್ ಠಾಣೆಗೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
17/08/2022 03:18 pm