ಹುಬ್ಬಳ್ಳಿ: ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗಿನ ಜಾವ ನೀಲಿಜನ್ ರಸ್ತೆಯಲ್ಲಿ ನಡೆದಿದೆ.
ಬೆಳಗಾವಿಯಿಂದ ನಗರಕ್ಕೆ ಹಾಲು ತರುತ್ತಿದ್ದ ಕ್ಯಾಂಟರ್ ವಾಹನ ನೀಲಿಜನ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಚಾಲಕ ಬೈಕ್ ಸಮೇತ ಕ್ಯಾಂಟರ್ ಅಡಿಯಲ್ಲಿ ಸಿಕ್ಕ ಸವಾರನ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಕೂಡಲೇ ಅಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಪೊಲೀಸರು ಗಾಯಗೊಂಡ ಬೈಕ್ ಸವಾರನನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದು, ಕ್ಯಾಂಟರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Kshetra Samachara
18/08/2022 09:37 am