ನವಲಗುಂದ: ನವಲಗುಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಹತ್ತಿರ ಖಾಸಗಿ ಹಾಗೂ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಅಮರಗೋಳ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಮಂಗಳೂರಿನಿಂದ ಕಲಬುರಗಿ ಕಡೆಗೆ ತೆರಳುವ ಸುಗುಮಾ ಟ್ರಾವೆಲ್ ಬಸ್‌ಗೆ ನರಗುಂದದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ನವಲಗುಂದ ಸರ್ಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kshetra Samachara
22/08/2022 10:15 am