ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಸಾವಿಗೀಡಾದ ವ್ಯಕ್ತಿಯೋರ್ವನ ಶವ ತೆಗೆದುಕೊಂಡು ಬರಲು ಆಗಮಿಸುತ್ತಿದ್ದಾಗ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರು.
ಹಳಿಯಾಳ ತಾಲೂಕಿನ ನಂದಿಗಟ್ಟದ ಗ್ರಾಮದ ಶಿವನಗೌಡ ಪಾಟೀಲ, ಅಮೃತ ಪಾಟೀಲ ಎಂಬ ಸಹೋದರರು ಸ್ಥಳದಲ್ಲೇ ಸಾವಿಗೀಡಾಗಿದ್ದರೆ. ಚಾಲಕ ಮಾರುತಿ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆದರೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಕ್ರೂಸರ್ ವಾಹನದಲ್ಲಿದ್ದ ಇನ್ನೂ ಇಬ್ಬರು ಗಾಯಾಳು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ
ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
22/08/2022 10:54 pm