ಹುಬ್ಬಳ್ಳಿ: ಅಡ್ಡ ಬಂದ ಸ್ಕೂಟಿಯನ್ನು ತಪ್ಪಿಸಲು ಹೋಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಗೆ ಹಾಗೂ ವಿದ್ಯುತ್ತ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆ ಹುಬ್ಬಳ್ಳಿ ಸಮೀಪದ ಕುಸುಗಲ್ ಗ್ರಾಮದ ಬಳಿ ನಡೆದಿದೆ.
ವಿಜಯಪುರದಿಂದ ಹುಬ್ಬಳ್ಳಿಯತ್ತ 50 ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಐರಾವತ ಬಸ್ಗೆ ಕುಸುಗಲ್ ಗ್ರಾಮದ ಬಳಿಯಲ್ಲಿ ಒಮ್ಮೆಲೇ ಸ್ಕೂಟಿ ಅಡ್ಡ ಬಂದ ಪರಿಣಾಮ ಬಸ್ ಚಾಲಕ ನಿಯಂತ್ರಣ ತಪ್ಪಿ ಸ್ಕೂಟಿ ಹಾಗೂ ರಸ್ತೆ ಬದಿಯ ಡಬ್ಬಾ ಅಂಗಡಿ ಹಾಗೂ ಲೈಟ್ ಕಂಬಕ್ಕೆ ಬಸ್ ಡಿಕ್ಕಿಯಾಗಿದ್ದು, ನಡೆಯಬಹುದಾದ ದೊಡ್ಡ ದುರಂತ ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಘಟನೆಯಲ್ಲಿ ಸ್ಕೂಟಿ ಚಾಲಕನ ತಲೆಗೆ ಹಾಗೂ ಕಾಲಿಗೆ ಗಾಯವಾಗಿದ್ದು ಆತನನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.
Kshetra Samachara
28/08/2022 11:44 am